ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷ 2025 ಫೆಬ್ರವರಿ 4 ರಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥೆ ಉದ್ಘಾಟನೆ ಆಗಲಿದ್ದು, ಸುಮಾರು 1008 ಸ್ವಾಮೀಜಿಗಳಿಂದ ಪಾದಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ ಎಂದು ಕೆ ಎಸ್ ಈಶ್ವರಪ್ಪ ಅವರು ತಿಳಿಸಿದರು.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 18 ಸಾಧುಸಂತರ ಪಾದ ಪೂಜೆ ಮಾಡಿ ಉದ್ಘಾಟನೆ ಮಾಡುತ್ತೇವೆ. ನಮ್ಮ ಸರ್ಕಾರ ಇದ್ದಾಗ ಎರಡು ಬಾರಿ ಮಠಕ್ಕೆ ಹಣ ಬಿಡುಗಡೆ ಮಾಡಿದ್ದೇವೆ. ಸದಾನಂದ ಗೌಡ ಹಾಗೂ ಬಸವರಾಜ ಬೊಮ್ಮಾಯಿ 2 ಬಾರಿ ಹಣ ಬಿಡುಗಡೆ ಮಾಡಿದರು. ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಣ್ಣ ಮಟ್ಟಗಳಿವೆ ಕ್ರಾಂತಿವೀರ ಬ್ರಿಗೇಡ್ನಿಂದ ಸಣ್ಣ ಮಟ್ಟಗಳಿಗೆ ನ್ಯಾಯ ಕೊಡಿಸುವ ಕೆಲಸವಾಗುತ್ತದೆ ನಾನು ಮೀಸಲಾತಿ ಪರವು ಅಲ್ಲ ವಿರೋಧವು ಅಲ್ಲ. ಹಿಂದು ಧರ್ಮದ ರಕ್ಷಣೆಗೆ ನಮ್ಮ ಹೋರಾಟ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು.