Tuesday, August 16, 2022

Latest Posts

ಮಾ.1ರಂದು ಆರೋಗ್ಯ ಸಚಿವರಿಂದ ರಾಜ್ಯಮಟ್ಟದ ಕೋವಿಡ್-19 ಲಸಿಕಾ ಕಾರ್ಯಕ್ರಮ ಉದ್ಘಾಟನೆ

ಹೊಸ ದಿಗಂತ ವರದಿ, ಕಾರವಾರ:

ಶಿರಸಿಯ ಡಾ. ಬಿ.ಅರ್. ಅಂಬೇಡ್ಕರ್ ಭವನದಲ್ಲಿ ಮಾ. 1ರಂದು ಬೆಳಿಗ್ಗೆ 11.15ಕ್ಕೆ 45 ರಿಂದ 59 ವಯೋಮಾನದ Co-Morbidity ಇರುವ ನಾಗರಿಕರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯೋಜಿಸಿರುವ ಕೋವಿಡ್-19 ರಾಜ್ಯ ಮಟ್ಟದ ಲಸಿಕಾ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಅವರು ಉದ್ಘಾಟಿಸಲಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎಸ್. ಅಶ್ವಥನಾರಾಯಣ, ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಶರದ್ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss