Friday, June 2, 2023

Latest Posts

ಕಲಬುರಗಿಯಲ್ಲಿ ಜವಳಿ ಪಾರ್ಕ್ ಉದ್ಘಾಟನೆ: ಈ ದಿನ ವಿಶೇಷ ಎಂದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯಲ್ಲಿ ಜವಳಿ ಪಾರ್ಕ್ (Kalaburagi Textile Park) ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಉದ್ಘಾಟನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಖುಷಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ (Narendra Modi), “ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಪರಂಪರೆಯನ್ನು ಸಂಭ್ರಮಾಚರಿಸುತ್ತದೆ ಮತ್ತು ರಾಜ್ಯದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ” ಎಂದರು.

ಮತ್ತೊಂದು ಟ್ವೀಟ್ ಮೂಲಕ, “ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ನಿಜಕ್ಕೂ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ದರ್ಶನ ಪಡೆಯುತ್ತದೆ” ಎಂದು ಹೇಳಿ PragatiKaPMMitra ಎಂದು ಹ್ಯಾಶ್ ಟ್ಯಾಗ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!