ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಲೋಕಾರ್ಪಣೆ: ರಾಷ್ಟ್ರದ ಪ್ರಗತಿಗೆ ಸಾಕ್ಷಿ ಎಂದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ-ಮುದ್ರಿತ (3-DPrinted Post Office) ಅಂಚೆ ಕಚೇರಿ ಇಂದು ಲೋಕಾರ್ಪಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi ) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ ಮಾಡಿರುವ ಅವರು, ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಲು ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ. ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ. ಇದು ಸ್ವಾವಲಂಬಿ ಭಾರತದ ಆತ್ಮವನ್ನು ಒಳಗೊಂಡಿದೆ. ಈ ಕಚೇರಿ ಪೂರ್ಣಗೊಳಿಸಲು ಶ್ರಮಿಸಿದವರಿಗೆ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕೇಂದ್ರ ರೈಲ್ವೇ ಮತ್ತು ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಕಟ್ಟಡವನ್ನು ಉದ್ಘಾಟಿಸಿದರು.

ಇದು ಸಂಪೂರ್ಣ ಸ್ವಯಂಚಾಲಿತ ಕಟ್ಟಡ ನಿರ್ಮಾಣ ತಂತ್ರಜ್ಞಾನವಾಗಿದೆ. ಇದರಲ್ಲಿ ರೊಬೊಟಿಕ್ ಪ್ರಿಂಟರ್ ಮೂಲಕ ವಿನ್ಯಾಸ ಮಾಡಲಾಗಿದೆ. ರೋಬೋಟಿಕ್ ತಂತ್ರಜ್ಞಾನದಿಂದ ಸಂಪೂರ್ಣ ನಿರ್ಮಾಣ ಕಾರ್ಯ 43 ದಿನಗಳ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಯಿತು. ಇಲ್ಲವಾಗಿದ್ದರೆ ಸುಮಾರು 6-8 ತಿಂಗಳುಗಳು ತೆಗೆದುಕೊಳ್ಳುತ್ತಿತ್ತು. 23 ಲಕ್ಷ ರೂ. ವೆಚ್ಚದಲ್ಲಿ ಈ ಕಚೇರಿ ನಿರ್ಮಾಣವಾಗಿದೆ. ಸಾಂಪ್ರದಾಯಿಕ ವಿಧಾನಕ್ಕೆ ಹೋಲಿಸಿದರೆ ಸುಮಾರು 30-40% ವೆಚ್ಚ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!