ಬ್ಯಾಡ್ಮಿಂಟನ್ ಆಟದ ಸಿಂಥೆಟಿಕ್ ಅಂಕಣ ಉದ್ಘಾಟನೆ

ದಿಗಂತ ವರದಿ ಮಡಿಕೇರಿ:

ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ 6.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಬ್ಯಾಡ್ಮಿಂಟನ್ ಆಟದ ಸಿಂಥೆಟಿಕ್ ಅಂಕಣವನ್ನು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು.
ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ಸಿಂಥೆಟಿಕ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧಿಕಾರಿ ಅವರು ಗಮನ ಸೆಳೆದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸುಸಜ್ಜಿತ ಸಿಂಥೆಟಿಕ್ ಬ್ಯಾಡ್ಮಿಂಟನ್ ಆಟದ ಅಂಕಣವನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರು ಬಳಸಿಕೊಳ್ಳುವಂತೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!