Saturday, April 1, 2023

Latest Posts

ರಾಜ್ಯ ಬಜೆಟ್ | ಭೂಸಿರಿ, ರೈತ ಸಿರಿ ಯೋಜನೆಯಡಿ ಪ್ರೋತ್ಸಾಹಧನ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಭೂಸಿರಿ, ರೈತ ಸಿರಿ ಯೋಜನೆಯಡಿ ಪ್ರೋತ್ಸಾಹಧನವನ್ನು ಘೋಷಿಸಿದ್ದಾರೆ.

ಭೂಸಿರಿ ಎಂಬ ನೂತನ ಯೋಜನೆಯಡಿಯಲ್ಲಿ 10,000 ರೂ. ಸಹಾಯಧನ ನೀಡುವುದಾಗಿ ಹೇಳಿದ್ದಾರೆ. ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್​​ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ ಮಾಡಿದ್ದಾರೆ.

ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು ಹಾಗೂ ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!