ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ 8 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 8,623 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21,46,777ಕ್ಕೆ ಏರಿಕೆಯಾಗಿದೆ. ಇನ್ನು ಇಂದು 3,648 ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 20,20,951ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಇಂದು ಕೋವಿಡ್ ನಿಂದಾಗಿ 51 ಮಂದಿ ಬಲಿಯಾಗಿದ್ದು ಆ ಮೂಲಕ ಈ ವರೆಗೂ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 52,092ಕ್ಕೆ ಏರಿಕೆಯಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಪ್ರಸ್ತುತ 72,530 ಸಕ್ರಿಯ ಪ್ರಕರಣಗಳಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.