ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಬಿಸಿ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಯಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.
ಮೆಜೆಸ್ಟಿಕ್, ಓಕಳಿಪುರಂ, ಮಾಗಡಿ ರೋಡ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು ಒಂದು ಗಂಟೆಯಿಂದ ಜಾಮ್ ಉಂಟಾಗಿದ್ದು, ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿವೆ. ಮಳೆ ಮಧ್ಯೆ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದಾರೆ.
ಇನ್ನು ಹೆಬ್ಬಾಳ ಫ್ಲೈಓವರ್ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಮಾನ ನಿಲ್ದಾಣದಿಂದ ಹೆಬ್ಬಾಳದ ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.