ಹೊಸದಿಗಂತ ವರದಿ, ಗದಗ:
ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಆಗಸ್ಟ್ 30 ರಂದು ಮಂಗಳವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ರಜೆ ಘೋಷಿಸಿದ್ದಾರೆ.
ಮಕ್ಕಳ ಆರೊಗ್ಯದ ಹಿತದೃಷ್ಟಿಯಿಂದ ಮತ್ತು ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಗಸ್ಟ್ 30 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ