ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನ ಮಳೆ ಸುರಿಯಲಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದ್ದು, ಅ.19 ರವರೆಗೂ ಮಳೆ ಸುರಿಯಲಿದೆ. ಬೆಂಗಳೂರು ಜತೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಮಳೆ ಮುಂದುವರಿಯಲಿದೆ.