ಕಲಬುರಗಿಯಲ್ಲಿ ನಿಲ್ಲದ ಮಳೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಹೊಸದಿಗಂತ ವರದಿ, ಕಲಬುರಗಿ:

ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದ್ದು,ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಾಳೆ ಸೋಮವಾರ 11-07-2022ರಂದು ಜಿಲ್ಲೆಯ ಎಲ್ಲಾ ಸಕಾ೯ರಿ,ಖಾಸಗಿ ಶಾಲಾ ಕಾಲೆಜುಗಳಿಗೆ ಹಾಗೂ ಸಂಘ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ಆರೆಂಜ್ ಆಲಟ್೯ ಜೋನ್ ಎಂದು ಘೋಷಣೆ ಮಾಡಲಾಗಿದ್ದು,ಸಂಬಂಧ ಪಟ್ಟ ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ನೋಡಲ್ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿ,ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!