Wednesday, December 7, 2022

Latest Posts

ತಮಿಳುನಾಡಿನಲ್ಲಿ ನಿಲ್ಲದ ಮಳೆ: ಇನ್ನೂ ಎರಡು ದಿನ ವರುಣನ ಆರ್ಭಟ, ಶಾಲೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಿರುವಳ್ಳೂರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಸುತ್ತಮುತ್ತ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಸುರಕ್ಷತಾ ಕ್ರಮವಾಗಿ ಸರ್ಕಾರ ಮೈಲಾಡುತುರೈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಶುಕ್ರವಾರದಿಂದ ನಿಲ್ಲದೆ ಮಳೆ ಸುರಿಯುತ್ತಿದ್ದು, ಚೆನ್ನೈನ ಹಲವು ಪ್ರದೇಶಗಳು ಜಲಾವೃತವಾಗಿವೆ. ಕಾಂಚೀಪುರಂ ಮತ್ತು ತ್ರಿವಲ್ಲೂರಿನಲ್ಲಿ ಕಾಲೇಜುಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!