ಹೊಸದಿಗಂತ ವರದಿ,ಹಾವೇರಿ:
ಹಾವೇರಿ ಜಿಲ್ಲೆಯಾದ್ಯಂತ ಕಳೆದ ಎರಡು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು , ತಂಪು ವಾತಾವರಣ ಹಾಗೂ ಶೀತಗಾಳಿ ಹಿನ್ನೆಲೆಯಲ್ಲಿ ಮಕ್ಕಳ ಅರೋಗ್ಯದ ಹಿತದೃಷ್ಟಿಯಿಂದ ಎರಡು ದಿನಗಳ ರಜೆಯನ್ನು ಜಿಲ್ಲಾದಿಕಾರಿ ಘೋಷಿಸಿದ್ದಾರೆ.
ಇನ್ನು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.26 ಮತ್ತು 27ರಂದು ಎರಡು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.