ಸತತ ಮಳೆ: ಬಾಗಲಕೋಟೆಯಲ್ಲಿ ಜನಜೀವನ ಅಸ್ತವ್ಯಸ್ತ

ಹೊಸದಿಗಂತ ವರದಿ, ಬಾಗಲಕೋಟೆ:
ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
ನಾಗರ ಪಂಚಮಿ ಹಬ್ಬದ ಅಂಗವಾಗಿ ವಿವಿಧ ದೇವಸ್ಥಾನಗಳಿಗೆ ಭಕ್ತರು ತೆರಳಲು ಮಳೆ ಅಡ್ಡಿಪಡಿಸಿತು. ಶ್ರಾವಣ ಮಾಸದ ಮೊದಲ ಮಂಗಳವಾರ ದೇವಸ್ಥಾನಗಳಿಗೆ ಭಕ್ತರು ಕಾಲ್ನಡಿಗೆಯಲ್ಲಿ ಬೆಳಗಿನ ಜಾವ ಮಳೆಯಲ್ಲೆ ತೆರಳಿದರು. ಮಳೆಯಲ್ಲೇ ಸರದಿಯಲ್ಲಿ ನಿಂತು ತಾಲೂಕಿನ ಮುಚಖಂಡಿ ವೀರಭದ್ರೇಶ್ವರ ದೇವರ ದರ್ಶನ ಪಡೆದುಕೊಂಡರು.
ಬೆಳಗ್ಗೆಯಿಂದ‌ ಮಳೆ ಸುರಿಯುತ್ತಿರುವುದರಿಂದ ಕೂಲಿಕಾರ್ಮಿಕರಿಗೆ ಕೆಲಸಕ್ಕೆ ಹೋಗಲು ತೊಂದರೆಯಾಯಿತು. ಕಾರ್ಮಿಕರು ಮನೆಯಲ್ಲೇ ಕಾಲ ಕಳೆಯಬೇಕಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!