ರಾಜಕಾರಣದಲ್ಲಿ ಉಚ್ಚಾಟನೆಯಂತಹ ಘಟನೆ ನಡೆಯಬಾರದು: ಡಾ.ಶರಣಪ್ರಕಾಶ್ ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ದುರಾದೃಷ್ಟಕರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕಾರಣದಲ್ಲಿ ಉಚ್ಚಾಟನೆಯಂತಹ ಘಟನೆಗಳು ನಡೆಯಬಾರದು. ಕಾಂಗ್ರೆಸ್ ಪಕ್ಷಕ್ಕೆ ಯತ್ನಾಳ್ ಅವರನ್ನು ಕರೆತರಲು ತಾವು ಸಾಮರ್ಥ್ಯ ಹೊಂದಿಲ್ಲ. ಅದಕ್ಕಾಗಿ ಬೇರೆ ವ್ಯಕ್ತಿಗಳು ಇದ್ದಾರೆ ಎಂದರು.

ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ದರ ಏರಿಕೆಯಾದರೂ ಹೆಚ್ಚುವರಿ 4 ರೂ. ನೇರವಾಗಿ ರೈತರಿಗೆ ಹೋಗುತ್ತದೆ. ಈ ಹೆಚ್ಚಳವನ್ನು ಕರ್ನಾಟಕ ಹಾಲು ಮಹಾಮಂಡಳಿ (KMF) ಪಡೆದುಕೊಳ್ಳದೇ, ರೈತರಿಗೆ ಲಾಭವಾಗುವಂತೆ ಮಾಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!