Monday, August 8, 2022

Latest Posts

ಪರಿಶಿಷ್ಠ ಜಾತಿಗೆ ಮಡಿವಾಳ ಜನಾಂಗವನ್ನು ಸೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ

ಹೊಸದಿಗಂತ ವರದಿ, ಮೈಸೂರು:

ತಮ್ಮ ಸಮುದಾಯವನ್ನು ಪರಿಶಿಷ್ಟಜಾತಿಗೆ ಸೇರಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲಾ ಮಡಿವಾಳರ ಪರಿಶಿಷ್ಠ ಜಾತಿ ಹೋರಾಟ ಸಮಿತಿಯಿಂದ ಸೋಮವಾರ ಪ್ರತಿಭಟನಾ ಧರಣಿ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ ಪ್ರತಿಭಟನಾಕಾರರು ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರೊ. ಅನ್ನಪೂರ್ಣ ಅವರ ವರದಿಯಂತೆ ಕುಲ ಶಾಸ್ತ್ರೀಯ ಅಧ್ಯಯನ ವರದಿಯನ್ನ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪರಿಶಿಷ್ಠ ಜಾತಿಗೆ ಮಡಿವಾಳ ಜನಾಂಗವನ್ನು ಸೇರಿಸಬೇಕು. ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಿ ಕೇಂದ್ರಕ್ಕೆ ಶಿಪಾರಸ್ಸು ಮಾಡುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss