ಆದಾಯ ತೆರಿಗೆ ಇಲಾಖೆ ಯಲ್ಲಿ 72 ಹುದ್ದೆಗಳ ನೇಮಕಾತಿ

ಆದಾಯ ತೆರಿಗೆ ಇಲಾಖೆಯಲ್ಲಿ 72 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 14,2023 ರಿಂದ ಫೆಬ್ರವರಿ 6,2023ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಪದವಿ ಮತ್ತು ಹತ್ತನೇ ತರಗತಿ ವಿದ್ಯಾ‍ರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆದಾಯ ತೆರಿಗೆ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 34,800/-ರೂಗಳ ವರೆಗೆ ವೇತನವನ್ನು ನೀಡಲಾಗುವುದು

ಆದಾಯ ತೆರಿಗೆ ಇಲಾಖೆ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು .

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://incometaxindia.gov.in/Pages/default.aspx ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 14,2023 ರಿಂದ ಫೆಬ್ರವರಿ 6,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!