September 15, 2026
Tuesday, September 15, 2026
spot_img

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಮೂಲಕ ದಾಖಲಾತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ವಿಶೇಷ ಗಮನ ಹರಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:

ಪ್ರತಿ ಗ್ರಾಮದಲ್ಲೂ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಮನೆ ಮನೆಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪುಗಳ ಮೂಲಕ ಶಾಲೆಗಳ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವ ಕಾರ್ಯಕ್ಕೂ ಒತ್ತು ನೀಡಲಾಗಿದೆ.

ಪೂರ್ವ ಪ್ರಾಥಮಿಕದಿಂದ ಹಿಡಿದು ಪ್ರೌಢಶಾಲೆ ಹಾಗೂ ಪದವಿಪೂರ್ವ ಹಂತದವರೆಗೆ ಎಲ್ಲಾ ತರಗತಿಗಳಲ್ಲೂ ದಾಖಲಾತಿ ಹೆಚ್ಚಿಸಲು ಸಮಗ್ರ ಕಾರ್ಯತಂತ್ರ ರೂಪಿಸಬೇಕು ಎಂದು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !