ಹೊಸದಿಗಂತ ವರದಿ, ಮಡಿಕೇರಿ:
ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದೇ ಅಪಘಾತಗಳಿಗೆ ಪ್ರಮುಖ ಕಾರಣವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾ. ಎಂ.ಎ.ಅಯ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಅಭಿಯಾನ ಮತ್ತು ನಾಗರಿಕ ಬಂದೂಕು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮ ಪಾಲನೆ ಕುರಿತು ವಿವರಿಸಿದರು.
ವೀರಾಜಪೇಟೆ ಉಪವಿಭಾಗ ಡಿವೈಎಸ್‍ಪಿ ನಿರಂಜನ್ ರಾಜೇ ಅರಸ್ ಅವರು ರಸ್ತೆ ಸಂಚಾರ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಇದೇ ಸಂದರ್ಭ ಗೋಣಿಕೊಪ್ಪ ವ್ಯಾಪ್ತಿಯ ನಾಗರಿಕರಿಗಾಗಿ ಆಯೋಜಿಸಿರುವ ಒಂದು ವಾರದ ನಾಗರಿಕ ಬಂದೂಕು ತರಬೇತಿಗೆ ಕೂಡಾ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ವಿವಿಧ ವಾಹನ ಸಂಘ ಸಂಸ್ಥೆಗಳ ಸದಸ್ಯರು, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಗೋಣಿಕೊಪ್ಪ ಸಿ.ಪಿ.ಐ ಗೋವಿಂದರಾಜು ಸ್ವಾಗತಿಸಿ, ಡಿಎಆರ್ ಪೊಲೀಸ್ ನಿರೀಕ್ಷಕ ಚನ್ನಾನಾಯಕ ವಂದಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ