ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿದ್ದು, ಈ ಹಿನ್ನೆಲೆ ಎಚ್ಚೆತ್ತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.
ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್ಹೆಚ್ಎಐ ಉಪ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರ ಸಮಿತಿ ಇದಾಗಿದೆ.
ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಎಕ್ಸ್‌ಪ್ರೆಸ್ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ.