ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಹೆಚ್ಚಳ: ಅಧಿಕಾರಿಗಳಿಗೆ ಸಂಸದೆ ಸುಮಲತಾ ಕ್ಲಾಸ್!

ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ಎನ್​​ಹೆಚ್​ಐ (NHI) ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಕ್ಲಾಸ್​ ತೆಗೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲಾ ಪಂಚಾಯತ್​ನ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮತನಾಡಿದ ಅವರು ​​ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರಿಯಾದ ಸರ್ವಿಸ್‌ ರಸ್ತೆಗಳಿಲ್ಲ. ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನು ಬಾಕಿ ಇದೆ ಎಂದು ತರಾಟೆಗೆ ತೆಗೆದುಕೊಂಡರು.

ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊನ್ನೆ ಚನ್ನಪಟ್ಟಣದ ಬಳಿ ಒಂದು ಟ್ರಕ್​ನ ದೃಶ್ಯ ನೋಡಿದರೇ ಮೈ ನಡುಗಿಸುತ್ತೆ. ರಸ್ತೆ ಇರುವುದು ಜನರ ಅನುಕೂಲಕ್ಕೆ. ಜನರ ಪ್ರಾಣ ಕಳೆದುಕೊಳ್ಳುವುದಕ್ಕಲ್ಲ. ಆದಷ್ಟೂ ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ. ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಉತ್ತರಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ರಾಹುಲ್ ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇವೆ. ಇದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆ ಸ್ಪಂದಿಸುತ್ತಿದೆ. ಅಪಘಾತ ತಡೆಯುವಲ್ಲಿ ನಾವು ಸಫಲರಾಗುತ್ತೇವೆ ಎಂದು ಸ್ವಷ್ಟನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!