ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಹೆಚ್ಚಳ: ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.

ಕಳೆದೊಂದು ವಾರದಿಂದ ಮಾಲಿನ್ಯ ಪ್ರಮಾಣದ ಹೆಚ್ಚಾಗುತ್ತಿದ್ದು, ಹೀಗಾಗಿ ಮತ್ತೆ ನಿರ್ಬಂಧ ಜಾರಿಗೊಳಿಸಲಾಗುತ್ತಿದೆ.

ಮೊದಲ ಹಂತದಲ್ಲಿ ಕಟ್ಟಡ ನಿರ್ಮಾಣ ಹಾಗೂ ಕೆಡವುವ ಕಾರ್ಯಗಳನ್ನು ಸ್ಥಗಿತಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಬೆನಲ್ಲೇ ಮತ್ತೆ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಸೇರಿದಂತೆ ಹಲವು ನಿರ್ಬಂಧಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಮುಂದಾಗಿದೆ.
ಕಳೆದ 24 ಗಂಟೆಯಲ್ಲಿ ವಾಯು ಮಾಲಿನ್ಯ AQI ವರದಿ ಪ್ರಕಾರ 407ಕ್ಕೆ ಏರಿಕೆಯಾಗಿದೆ. ಈ ಕುರಿತು ಭಾನುವಾರ ಸಭೆ ಸೇರಿದ ಸಮಿತಿ, ಕಠಿಣ ನಿರ್ಬಂಧ ಜಾರಿಗೊಳಿಸವು ಮೂಲಕ ಮಾಲಿನ್ಯ ನಿಯಂತ್ರಿಸಲು ಆದೇಶ ನೀಡಿದೆ.

ಕಳೆದ ತಿಂಗಳ ಆರಂಭಿಕ ವಾರದಲ್ಲಿ ದೆಹಲಿ ಮತ್ತೆ ಸಹಜ ಸ್ಥಿತಿಗೆ ಮರಳತೊಡಗಿತ್ತು. ಶಾಲಾ ಕಾಲೇಜುಗಳು ಆರಂಭಗೊಂಡಿತ್ತು. ಕಟ್ಟಡ ನಿರ್ಮಾಣ ಪುನರ್ ಆರಂಭಗೊಂಡಿತ್ತು. ಆದರೆ ಇದೀಗ ಮತ್ತೆ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!