Wednesday, August 10, 2022

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: ದೇಶದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 22,854 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,854 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 18,100 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,09,38,146ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,89,226 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 279 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,189 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss