ಕೊರೋನಾ ಪ್ರಕರಣಗಳಲ್ಲಿ ಹೆಚ್ಚಳ: ದೇಶದಾದ್ಯಂತ 3,303 ಹೊಸ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 3,303 ಹೊಸ ಕೇಸ್‌ ದಾಖಲಾಗಿದೆ. ದೇಶದಾದ್ಯಂತ 39 ಸಾವಿನ ಪ್ರಕರಣಗಳು ಸಂಭವಿಸಿದೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.

ಪ್ರಸ್ತುತ 16,980 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ಇಲ್ಲಿಯವರೆಗೂ 4.3 ಕೋಟಿಗೂ ಹೆಚ್ಚಿನ ಜನರು ಸೋಂಕಿನಿಂದ ಬಾಧಿತರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಒಟ್ಟು 2,563 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ ಸುಮಾರು 4.26 ಕೋಟಿಗೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!