ಕೊರೋನಾ ಪ್ರಕರಣ ಹೆಚ್ಚಳ: ವಕೀಲರು ಕೋರ್ಟ್ ಗೆ ಹಾಜರಾಗುವ ಅವಶ್ಯಕತೆ ಇಲ್ಲ ಎಂದ ನ್ಯಾ. ಡಿ.ವೈ. ಚಂದ್ರಚೂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್​​ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ.

ದೇಶದಲ್ಲಿ ಇಂದು ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ಈ ಕಾರಣದಿಂದ ವಕೀಲರು ಯಾರು ಕೋರ್ಟ್​ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ವರದಿಯನ್ನು ನಾವು ಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ ಆ ಕಾರಣಕ್ಕೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಕೀಲರು ಆನ್‌ಲೈನ್‌ ಮೂಲಕವೇ ಕೆಲಸ ಮಾಡಲಿ. ಆನ್​​ಲೈನ್ ಮೂಲಕವೇ ನಿಮ್ಮ ವಾದಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಸುಪ್ರೀಂ ಕೋರ್ಟ್ ಆ್ಯಪ್ ಮತ್ತು ಯೂಟ್ಯೂಬ್ ಮೂಲಕ ಸಂವಿಧಾನ ಪೀಠದ ಪ್ರಕ್ರಿಯೆಗಳನ್ನು ಲೈವ್-ಸ್ಟ್ರೀಮ್ ಮಾಡಲು ಪ್ರಾರಂಭಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!