ದೇಶದಲ್ಲಿ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 656 ಹೊಸ ಕೇಸ್ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ದೇಶದಲ್ಲಿ ಕೊರೋನಾ ಮತ್ತೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,742 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೋವಿಡ್‌-19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದಾಖಲಾಗಿವೆ.ಈವರೆಗೆ 5,33,333 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂತರ್ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!