Tuesday, August 16, 2022

Latest Posts

ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳ: ಮತ್ತೆ 15 ದಿನಗಳ ಕಾಲ ನೈಟ್ ಕರ್ಫ್ಯೂ ವಿಸ್ತರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಗುಜರಾತ್‌ನ ನಾಲ್ಕು ನಗರಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ.
ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಗುಜರಾತ್‌ ಸರ್ಕಾರವು ಶುಕ್ರವಾರ ರಾತ್ರಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಅಹಮದಾಬಾದ್‌, ಸೂರತ್‌, ವಡೋದರ, ರಾಜ್‌ಕೋಟ್‌ನಲ್ಲಿ ಜಾರಿಯಲ್ಲಿದ್ದ ರಾತ್ರಿ ಕರ್ಫ್ಯೂ ಫೆಬ್ರುವರಿ 28 ರಂದು ಕೊನೆಗೊಳ್ಳಬೇಕಿತ್ತು. ಇದೀಗ ಈ ಕರ್ಫ್ಯೂವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ.
ಮಧ್ಯರಾತ್ರಿಯಿಂದ ಬೆಳಿಗ್ಗೆ 6 ಗಂಟೆ ತನಕ ರಾತ್ರಿ ಕರ್ಫ್ಯೂವನ್ನು ಹೇರಲಾಗಿತ್ತು. ಇದೇ ಸಮಯ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss