ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ತಮಿಳುನಾಡು ಪ್ರವಾಸ ರದ್ದಾಗಿದೆ.
ಇದೇ ತಿಂಗಳ 12 ರಂದು ಮಧುರೈ, ವಿರುದನಗರ, ಪುದುಚೇರಿಗೆ ಪ್ರಧಾನಿ ಮೋದಿ ಭೇಟಿ ಮಾಡಬೇಕಿತ್ತು. ದೇಶದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಭೀತಿ ಹೆಚ್ಚಾಗುತ್ತಿದ್ದು, ಪ್ರಧಾನಿ ಮೋದಿ ಪ್ರವಾಸ ರದ್ದಾಗಿದೆ.
ಕೋವಿಡ್ನಿಂದಾಗಿ ಲಾಕ್ಡೌನ್ ನಿಬಂಧನೆಗಳು ಜಾರಿಯಲ್ಲಿವೆ. ಸಭೆ ಸಮಾರಂಭಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭೇಟಿ ರದ್ದಾಗಿದೆ.
ಒಮಿಕ್ರಾನ್ ರೂಪಾಂತರ ತೀವ್ರತೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.