ಕೋವಿಡ್ ಕೇಸ್ ಹೆಚ್ಚಳ: ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸಲು ಬಿಬಿಎಂಪಿ ನಿರ್ಧಾರ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಿನನಿತ್ಯ ನಡೆಸುವ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿದೆ.

ಬಿಬಿಎಂಪಿ ಮಟ್ಟದಲ್ಲಿ 1,500 ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಸಂಖ್ಯೆಯನ್ನು 5,000ಕ್ಕೆ ಏರಿಕೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವೈದ್ಯಕೀಯ ಅಧೀಕ್ಷಕ ಡಾ. ಕೆಂಪರಾಜ್ ಟಿ., ನಾಗರಿಕರಲ್ಲಿ ಕೋವಿಡ್ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಈ ನಡುವೆ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಇಬ್ಬರು ಸ್ಥಳೀಯ ರೋಗಿಗಳನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!