ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳಿಂದ ಡೆಂಗ್ಯೂ ಕೇಸ್‌ಗಳ ಸಂಖ್ಯೆ ಹೆಚ್ಚಾಗಿದೆ, ಈಗಾಗಲೇ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿ ಕಂಡುಬಂದಿವೆ.
ಡೆಂಗ್ಯೂ ಒಬ್ಬರಿಂದ ಒಬ್ಬರಿಗೆ ಹರಡುವುದರಿಂದಾಗಿ ಸೂಕ್ಷ್ಮ ಕ್ರಮಗಳನ್ನು ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಎಂದಿದ್ದಾರೆ. ಸೊಳ್ಳೆ ಔಷಧ ಸಿಂಪಡಣೆ, ನೀರು ಶೇಖರಣೆ ಆಗದಂತೆ ನೋಡಿಕೊಳ್ಳುವುದು, ಸ್ವಚ್ಛತೆ ಬಗ್ಗೆ ಗಮನ ಹರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೂರು ತಿಂಗಳಲ್ಲಿ ಏಳು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.