ಹೊಸದಿಗಂತ ವರದಿ,ಬೆಂಗಳೂರು:
ರಾಜ್ಯದಲ್ಲಿ ಇತ್ತೀಚೆಗೆ ಹರಡುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಮುಂದಿನ 2 ವಾರಗಳಲ್ಲಿ ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಗುರುವಾರ ನಗರದ ವಿಕಾಸಸೌಧದಲ್ಲಿ ಜಿಲ್ಲಾಧೀಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಹಿರಿಒಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಸರನ್ಸ್ ಸಭೆ ನಡೆಸಿದ ಸಚಿವರು, ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳು ತಹಶೀಲ್ದಾರ್ ಸೇರಿದಂತೆ ಎಲ್ಲ ಅಧಿಕಾರಿಗಳು ಆಶಾ ಅಂಗನವಾಡಿ ಕಾರ್ಯಕರ್ತೆಯರು ಲಾರ್ವಾ ಮೂಲಗಳನ್ನು ನಾಶಪಡಿಸುವುದು ಸೇರಿದಂತೆ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಹಾಗೂ ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಹೆಚ್ಚಾಗಿ ಡೆಂಗ್ಯೂ ಸ್ಥಳಗಳಲ್ಲಿ ಕ್ಲಿನಿಕ್ ತೆರೆಯಬೇಕಿದ್ದು, ಇಂತಹ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರೂ ಕಡ್ಡಾಯವಾಗಿ ಡೆಂಗ್ಯೂ ಪರೀಕ್ಷೆಗೆ ಒಳಪಡಿಸಿ, ಆರಂಭದಲ್ಲೇ ಡೆಂಗ್ಯೂ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಡೆಂಗ್ಯೂ ಜ್ವರವನ್ನು ಗಂಭೀರವಾಗಿ ಪರಿಗಣಿಸಿ, ಇದಕ್ಕೆ ಯಾವುದೇ ಸಾವುಗಳು ಸಂಭವಿಸದಂತೆ ಕಟ್ಟೆಚ್ಚರವಹಿಸುವುದರ ಜತೆಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಮತ್ತು ಸಾರ್ವ ಜನಿಕರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವ ಹಿಸಿ ಮನೆ, ಕಚೇರಿ, ಶಾಲಾ – ಕಾಲೇಜು ಖಾಲಿ ಸೈಟುಗಳ ಪರಿಸರವನ್ನು ಸ್ವಚ್ಛಗೊಳಿಸಿ. ನೀರು ನಿಲ್ಲದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. ಕಟ್ಟಡ ಕೆಲಸದಲ್ಲಿ ತೊಡಗಿರುವ ಕಾರ್ಮಿಕರನ್ನು ಸ್ಟ್ರೀನಿಂಗ್‌ಗೆ ಒಳಪಡಿಸಬೇಕು ವಿಶೇಷವಾಗಿ ಶಿಕ್ಷಕಿಯರು ಶಾಲಾ ಮಕ್ಕಳಿಗೆ ಡೆಂಘೀ ಕುರಿತು ಮಾಹಿತಿ ನೀಡುವುದರೊಂದಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಅಲ್ಲದೇ, ಪ್ರತಿ ಶುಕ್ರವಾರ ಎಲ್ಲ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಿಗಳು, ಸಾರ್ವಜನಿಕರ ಜತೆಗೂಡಿ ವಾರದಲ್ಲಿ ಒಂದು ದಿನ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ಅಭಿಯಾನದಲ್ಲಿ ಭಾಗವಹಿಸುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದರು. ಅಧಿಕ ಶುಲ್ಕ ಪಡೆದರೆ ಕ್ರಮ ಜನಸಾಮಾನ್ಯರಿಗೆ ಹೊರೆಯಾಗವು ದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಈಗಾಗಲೇ ಖಾಸಗಿ ಆಸ್ಪತ್ರೆ ಪ್ರಯೋಗಾಲಯಗಳಲ್ಲಿ ಡೆಂಗ್ಯೂ ಪರೀಕ್ಷೆಯ ದರ ನಿಗದಿಪಡಿಸಿದೆ. ಆದರೆ, ಹೆಚ್ಚು ಶುಲ್ಕ ಪಡೆದ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.
ಪ್ರತಿದಿನ ಡೆಂಗ್ಯೂ ಬುಲೆಟಿನ್: ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ದಿನನಿತ್ಯ ಡೆಂಗ್ಯೂ ಅಂಕಿಅಂಶಗಳನ್ನು ಒಳಗೊಂಡ ಬುಲೆಟಿನ್ ಬಿಡುಗಡೆಗೆ ನಿರ್ಧರಿಸಲಾಗಿದೆ ಮಾಧ್ಯಮಗಳಲ್ಲಿ ವಿಭಿನ್ನ ಅಂಕಿ ಅಂಶಗಳು ಪ್ರಕಟವಾಗುತ್ತಿದ್ದು, ಇದು ಜನರಲ್ಲಿ ಭೀತಿ ಮೂಡಿಸುತ್ತಿದೆ ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಪ್ರತಿನಿತ್ಯ ಮಾಹಿತಿ ಸಂಗ್ರಹಿಸಿ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ಇಲಾಖೆಯ ಆಯುಕ್ತರಾದ ರಂದೀಪ್ ತಿಳಿಸಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ನವೀನ್ ಭಟ್ ಮತ್ತು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಝೀಕಾ ವೈರಸ್ ಬಗ್ಗೆಯೂ ಎಚ್ಚರವಹಿಸಲು ಕ್ರಮ:
ಈಡಿಸ್ ಝೀಕಾ ವೈರಸ್ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ಚರಿಕೆ ವಹಿಸುವುದು ಅಗತ್ಯವಾಗಿದ್ದು, ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಪ್ರಕರಣ ಪತ್ತೆಯಾಗಿದೆ. ಆದರೆ, ಇನ್ನೂ ಕನ್ಹರ್ಮ್ ಆಗಿಲ್ಲ ಝೀಕಾ ಅಷ್ಟೇನು ಅಪಾಯಕಾರಿ ಅಲ್ಲದಿದ್ದರೂ, ಎಚ್ಚರಿಕೆವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚನೆ ನೀಡಿದರು.