ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮಕ್ಕೆ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇಂದಿನಿಂದ, ವಾಹನ ಚಾಲನೆ ನಿಷೇಧವು ಮುಂದಿನ ಸೂಚನೆಯವರೆಗೆ ಜಾರಿಯಲ್ಲಿರುತ್ತದೆ. ಪ್ರವಾಸಿಗರಿಗೆ ರಂಗನತಿಟ್ಟು ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮೈಸೂರು ವನ್ಯಜೀವಿ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಆರ್ ಎಸ್ ಜಲಾಶಯ ಪೂರ್ಣ ಸಾಮರ್ಥ್ಯ ತಲುಪಿರುವ ಹಿನ್ನೆಲೆಯಲ್ಲಿ ಇಂದು ಹತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಸಂಜೆ ವೇಳೆಗೆ ಅಣೆಕಟ್ಟೆಯಲ್ಲಿ ಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಒಳಹರಿವು ಹೆಚ್ಚಾದಂತೆ ಹೊರಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಇದೀಗ 10,000 ರಿಂದ 25,000 ಕ್ಯೂಸೆಕ್ ನೀರನ್ನು ನದಿಗೆ ಬಿಡಲು ನಿರ್ಧರಿಸಲಾಗಿದೆ.