Monday, December 11, 2023

Latest Posts

ಕೇಂದ್ರದಿಂದ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ: ಪ್ರಹ್ಲಾದ್ ಜೋಶಿ

ಹೊಸದಿಗಂತ ವರದಿ, ಹುಬ್ಬಳ್ಳಿ:

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಗೋ ಸೇರಿ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವ ಪ್ರಕಾರ ಚನ್ನಂಗಿ ಬೇಳೆ ಪ್ರತಿ ಕ್ವಿಂಟಾಲ್‌ಗೆ ೪೨೫ ರೂ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು, ಒಟ್ಟು ಒಂದು ಕ್ವಿಂಟಾಲ್‌ಗೆ ೬೪೨೫ ರೂ. ನಿಗದಿ ಮಾಡಲಾಗಿದೆ. ಗೋಗೆ ೧೫೦ ರೂ ಹೆಚ್ಚಳ ಮಾಡುವುದರ ಮೂಲಕ ಒಟ್ಟು ಒಂದು ಕ್ವಿಂಟಾಲ್‌ಗೆ ೨೨೭೫ ರೂ. ನಿಗದಿ ಮಾಡಲಾಗಿದೆ. ಕಡಲೆ ರೂ ೧೦೫ ರೂ. ಹೆಚ್ಚಳ ಮಾಡುವುದರ ಮೂಲಕ ಒಟ್ಟು ಒಂದು ಕ್ವಿಂಟಾಲ್‌ಗೆ ೫೪೪೦ ರೂ. ನಿಗದಿ ಮಾಡಲಾಗಿದೆ. ಬಾರ್ಲಿಗೆ ೧೧೫ ರೂ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು ಒಂದು ಕ್ವಿಂಟಾಲ್ ಗೆ ೧೮೫೦ ರೂ. ನಿಗದಿ ಮಾಡಲಾಗಿದೆ. ಸಾಸಿವೆಗೆ ೨೦೦ ರೂ. ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ್ದು ಒಂದು ಕ್ವಿಂಟಾಲ್‌ಗೆ ೫೬೫೦ ರೂ. ನಿಗದಿ ಮಾಡಲಾಗಿದೆ. ಕುಸುಬೆಗೆ ೧೫೦ ರೂ. ಹೆಚ್ಚಳ ಮಾಡುವುದರೊಂದಿಗೆ ಒಂದು ಕ್ವಿಂಟಾಲ್ ಗೆ ೫೮೦೦ ರೂ. ನಿಗದಿ ಪಡಿಸಲಾಗಿದೆ.
೨೦೧೩-೧೪ನೇ ಸಾಲಿನ ಬೆಂಬಲಬೆಲೆ ಗಮನಿಸಿದರೆ ಈ ಬಾರಿ ಶೇ ೫೦ ರಷ್ಟು ಹೆಚ್ಚಳ ಮಾಡಿರುವುದು ಮೋದಿ ಸರಕಾರದ ವಿಶೇಷ ಎಂದು ಸಚಿವ ಜೋಶಿ ಹೇಳಿದ್ದಾರೆ. ಕೇಂದ್ರ ಸರಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಹಿಂಗಾರು ಬೆಳೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!