ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಏಳಿಗೆಗಾಗಿ ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹಲವಾರು ಉಪಕ್ರಮಗಳನ್ನು ಘೋಷಿಸಿದ್ದಾರೆ.
ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮತ್ತು ಪಾರಂಪರಿಕ ತಾಣವಾದ ಬಾದಾಮಿಯ ಚಾಲುಕ್ಯ ಉತ್ಸವದಲ್ಲಿ ನೃತ್ಯೋತ್ಸವ ಕಾರ್ಯಕ್ರಮವನ್ನು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಆಯೋಜಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ಅಂತಾರಾಷ್ಟ್ರೀಯ ಬಸವ ಆಧ್ಯಾತ್ಮಿಕ ಹಾಗೂ ವಚನ ಅಧ್ಯಯನ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲು ತಾತ್ವಿಕ ಅನುಮೋದನೆ ನೀಡಲಾಗಿದ್ದು, ಈ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಿ ವಿಸ್ತ್ರತ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.