ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಸಂಪುಟವು ಇಂದು ಗೋಧಿ ಮತ್ತು ಬೇಳೆ ಸೇರಿದಂತೆ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಈ ಮೂಲಕ ರೈತರ ಕಲ್ಯಾಣಕ್ಕಾಗಿ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2025-26 ರ ಮಾರುಕಟ್ಟೆ ಋತುವಿನಲ್ಲಿ ಗೋಧಿ ಮತ್ತು ಬೇಳೆ ಸೇರಿದಂತೆ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದ ನಂತರ ಪ್ರಧಾನಿ ಮೋದಿ ಅವರು ರೈತರ ಕಲ್ಯಾಣಕ್ಕಾಗಿ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಈ ಕ್ರಮವು ದೇಶದ ಆಹಾರ ಉತ್ಪಾದಕರ ಜೀವನವನ್ನು ಸರಾಗಗೊಳಿಸುವ ಉದ್ದೇಶ ಹೊಂದಿದೆ ಎಂದು ಮೋದಿ ಹೇಳಿದ್ದಾರೆ.
ಇದರ ಜೊತೆಗೆ ಸಂಪುಟ ಸಭೆಯಲ್ಲಿ, ಕಾಶಿಯಲ್ಲಿ ಮಹತ್ವದ ಮೂಲಸೌಕರ್ಯ ಯೋಜನೆ, ಅತಿ ದೊಡ್ಡ ರೈಲು-ರಸ್ತೆ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.
ಕಾಶಿಯ ನಿವಾಸಿಗಳ ಮೂಲಸೌಕರ್ಯ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದ ಪ್ರಧಾನಿ ಮೋದಿ, ಗಂಗಾನದಿಯ ಮೇಲಿನ ಹೊಸ ಸೇತುವೆಯು ಯಾತ್ರಿಕರು, ಪ್ರವಾಸಿಗರು ಮತ್ತು ಸ್ಥಳೀಯ ಸಮುದಾಯಗಳ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಹೊಸ ಉದ್ಯೋಗ ಹಾಗೂ ವ್ಯಾಪಾರ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.