KRS ಡ್ಯಾಂನಿಂದ ಹೊರ ಹರಿವು ಹೆಚ್ಚಳ: ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನೀರಿನ ಅಭಾವ ಹೆಚ್ಚಿದೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟೆಯಿಂದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಹಿತ ರಕ್ಷಣಾ ಸಮಿತಿ ಹಾಗೂ ಕನ್ನಡ ಸೇನೆಯಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಕುಡಿಯುವ ನೀರಿಗಾಗಿ ಎಂದು ಸುಳ್ಳು ಹೇಳಿ ತಮಿಳುನಾಡಿಗೆ ನೀರು ಬಿಡುತ್ತಾರೆ. ಸರಕಾರ ರಾಜ್ಯದ ಜನತೆಯನ್ನು ನೀರಿನ ಅಭಾವದತ್ತ ದೂಡುತ್ತಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!