ಕೆಆರ್ ಎಸ್ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಳ : ಇಂದು ಬಂದ್ ಬಗ್ಗೆ ಅಧಿಕೃತ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದ್ದು, ಪ್ರತಿಭಟನೆಗಳ ನಡುವೆಯೇ ಕೆಆರ್‌ಎಸ್ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಳವಾಗಿದೆ.

ಭಾನುವಾರ 6,874ಕ್ಯುಸೆಕ್‌ನಷ್ಟು ನೀರು ಬಿಡಲಾಗಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಕನ್ನಡಪರ ಸಂಘಟನೆಗಳು ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಆದರೆ ಇದೀಗ ಶುಕ್ರವಾರ ಕರ್ನಾಟಕ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಕನ್ನಡ ಪರ ಸಂಘಟನೆಗಳ ಜೊತೆ ಸಭೆ ನಡೆಸಲಿದ್ದು, ಅಧಿಕೃತವಾಗಿ ಬಂದ್ ದಿನವನ್ನು ಘೋಷಿಸುವ ಸಾಧ್ಯತೆಯಿದೆ.

ಸೆ.27ರವರೆಗೆ ಪ್ರತಿದಿನ ತಮಿಳುನಾಡಿಗೆ 5,000 ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದ ಲೀಗಲ್ ಟೀಂ ಸೂಕ್ತ ರೀತಿಯಲ್ಲಿ ವಾದ ಮಾಡಿಲ್ಲ ಎಂದು ಹೇಳಿದ್ದಾರೆ.

ಇನ್ನು ಮಂಡ್ಯ, ಮೈಸೂರು ಭಾಗದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ರೈತರು ರಸ್ತೆ ಮೇಲೆ ಮಲಗಿ, ರಸ್ತೆಯಲ್ಲಿ ಟೀ ಮಾಡಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!