ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಳವಾಗಿದೆ.
ಹೀಗಾಗಿ ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು 5,675 ಹೊಸ ಬಸ್ ಖರೀದಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಈ ಉದ್ದೇಶದಿಂದ ಬಸ್ ಖರೀದಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.