ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಸರ್ಕಾರ ಹೆಚ್ಚಿಸಿಸಲಾಗಿದೆ. ಕುಟುಂಬ ಪಿಂಚಣಿ ಮೇಲಿನ ವಿನಾಯಿತಿ ಮಿತಿಯನ್ನು 15 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಈ ಎರಡು ಬದಲಾವಣೆಗಳಿಂದ ನಾಲ್ಕು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.