ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಳ: ನೀವು ಏನು ಮಾಡುತ್ತಿದ್ದೀರಿ? ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳ ಹೆಚ್ಚಳದ ಕುರಿತು ಸುಪ್ರೀಂ ಕೋರ್ಟ್ ಇಂದು ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ .

ಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ಈ ವರ್ಷ ಇಲ್ಲಿಯವರೆಗೆ ಕೋಟಾದಲ್ಲಿ 14 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ನೀವು ಒಂದು ರಾಜ್ಯವಾಗಿ ಏನು ಮಾಡುತ್ತಿದ್ದೀರಿ? ಈ ಮಕ್ಕಳು ಕೋಟಾದಲ್ಲಿ ಮಾತ್ರ ಆತ್ಮಹತ್ಯೆಯಿಂದ ಏಕೆ ಸಾಯುತ್ತಿದ್ದಾರೆ? ನೀವು ಒಂದು ರಾಜ್ಯ ಸರ್ಕಾರವಾಗಿ ಈ ಬಗ್ಗೆ ಯೋಚಿಸಿಲ್ಲವೇ?” ಎಂದು ರಾಜಸ್ಥಾನ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನು ನ್ಯಾಯಮೂರ್ತಿ ಪಾರ್ದಿವಾಲಾ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಆತ್ಮಹತ್ಯೆ ಪ್ರಕರಣಗಳನ್ನು ಪರಿಶೀಲಿಸಲು ರಾಜಸ್ಥಾನದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ಖರಗ್‌ಪುರದ ಐಐಟಿಯಲ್ಲಿ ಓದುತ್ತಿರುವ 22 ವರ್ಷದ ವಿದ್ಯಾರ್ಥಿಯ ಸಾವಿನ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಮೇ 4ರಂದು ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಖರಗ್‌ಪುರದ ಐಐಟಿ ವಿದ್ಯಾರ್ಥಿನಿಯ ಸಾವಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೂ ಮೇ 8ರಂದು ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 4 ದಿನಗಳ ವಿಳಂಬವಾಗಿದೆ. ಇದಕ್ಕೆ ಕಾರಣವೇನೆಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.ಈ ವಿಷಯಗಳನ್ನು ಹಗುರವಾಗಿ ಪರಿಗಣಿಸಬೇಡಿ. ಇವು ತುಂಬಾ ಗಂಭೀರ ವಿಷಯಗಳು ಎಂದು ನ್ಯಾಯಪೀಠ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!