Sunday, February 5, 2023

Latest Posts

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರ ಗೌರವಧನ ಹೆಚ್ಚಳ: ಸರ್ಕಾರಕ್ಕೆ ಎಂ.ಸತೀಶ್ ಅಭಿನಂದನೆ

ಹೊಸದಿಗಂತ ವರದಿ,ಬಳ್ಳಾರಿ:

ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವ ಧನವನ್ನು ಸರ್ಕಾರ ಹೆಚ್ಚಳ ಮಾಡಿದ್ದು, ಈ ಕುರಿತು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಜಂಟಿ ಕಾರ್ಯದರ್ಶಿ ಎಂ.ಎನ್.ಬಾನೊಳ್ಳಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಎಮ್ಮೆಲ್ಸಿ ವೈ.ಎಂ.ಸತೀಶ್ ಅವರು ಪ್ರಕಟಣೆ ನೀಡಿದ್ದು, ರಾಜ್ಯದ ಎಲ್ಲ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಾಗೂ ಸದಸ್ಯರ ಗೌರವ ಧನವನ್ನು ಹೆಚ್ಚಳ ಮಾಡುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ.ಈ ಹಿಂದೆ ಗ್ರಾ.ಪಂ. ಅಧ್ಯಕ್ಷರಿಗೆ 3 ಸಾವಿರ ರೂ.ಗೌರವ ಧನವನ್ನು ನೀಡಲಾಗುತ್ತಿತ್ತು, ಅದನ್ನು 6 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಉಪಾಧ್ಯಕ್ಷರಿಗೆ 2 ಸಾವಿರ ರೂ.ನೀಡಲಾಗುತ್ತಿತ್ತು, ಅದನ್ನು 4 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಅದರಂತೆ ಗ್ರಾ.ಪಂ.ಸದಸ್ಯರಿಗೆ 1 ಸಾವಿರ ರೂ.ಗಳಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸಿ ಸರ್ಕಾರ ಗೌರವವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಗ್ರಾ.ಪಂ.ಚುನಾಯಿತ ಜನಪ್ರತಿನಿಧಿಗಳ ಪರವಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!