ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: 2,380 ಹೊಸ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದಲ್ಲಿ 2,380 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15 ಶೇಕಡಾ ಹೆಚ್ಚಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 56 ಜನರು ವೈರಲ್ ಕಾಯಿಲೆಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 5,22,062 ಕ್ಕೆ ಏರಿದೆ.

ಏಪ್ರಿಲ್‌ ಮೊದಲವಾರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿತ್ತು. ಆದರೆ ಪ್ರಸ್ತುತ ಕೋವಿಡ್‌ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ದೆಹಲಿಯೊಂದರಲ್ಲೇ 18,70,692 ಕೋವಿಡ್‌ ಪ್ರಕರಣ ದಾಖಲಾಗಿದ್ದು ಸೋಂಕಿನ ಪ್ರಮಾಣ 60% ರಷ್ಟು ಏರಿಕೆಯಾಗಿದೆ.

ಇಲ್ಲಿಯವರೆಗೆ 187.07ಕೋಟಿ ಜನರಿಗೆ ವ್ಯಾಕ್ಸಿನೇಷನ್‌ ನೀಡಲಾಗಿದೆ. ಇವುಗಳಲ್ಲಿ 12 ರಿಂದ 14 ವರ್ಷದ 2,53,87,677 ಕ್ಕೂ ಹೆಚ್ಚು ಮಕ್ಕಳಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ. ಹಾಗೂ 18 ರಿಂದ 59 ವಯಸ್ಸಿನವರಿಗೆ 2,37,279 ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!