Tuesday, February 27, 2024

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಯುಪಿಐ ವಹಿವಾಟು ಮಿತಿ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿನ ಯುಪಿಐ ವಹಿವಾಟು ಮಿತಿಯನ್ನು ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಮೂರು ದಿನಗಳ ಹಣಕಾಸು ನೀತಿ ಸಭೆಯಲ್ಲಿ ಈ ಮಹತ್ವದ ಮಾಹಿತಿ ನೀಡಿದೆ. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಯುಪಿಐ ವಹಿವಾಟು ಮಿತಿಯನ್ನು ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರಿಂದ ಹೆಚ್ಚಿನ ಮೊತ್ತದ ಆನ್‌ಲೈನ್ ಪಾವತಿಗಳನ್ನು ಮಾಡಲು ಗ್ರಾಹಕರಿಗೆ ಸಹಾಯವಾಗುತ್ತದೆ.

ಆರ್‌ಬಿಐ ಕಾಲಕಾಲಕ್ಕೆ ಯುಪಿಐ ವಹಿವಾಟಿನ ವಿವಿಧ ವರ್ಗಗಳ ಮಿತಿಗಳನ್ನು ಪರಿಶೀಲನೆ ಮಾಡುತ್ತದೆ. ಭಾರತದಲ್ಲಿ ಚಿಲ್ಲರೆ ಡಿಜಿಟಲ್ ಪಾವತಿಗಳಿಗೆ ಇದು ಹೆಚ್ಚು ಜನಪ್ರಿಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!