May 28, 2026
Thursday, May 28, 2026
spot_img

LPG ಉತ್ಪಾದನೆ ಸಾಧ್ಯವಾದಷ್ಟು ಹೆಚ್ಚಿಸಿ: ಸಂಸ್ಕರಣಾ ಘಟಕಗಳಿಗೆ ಕೇಂದ್ರದಿಂದ ತುರ್ತು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆ, ದೇಶದಲ್ಲಿ ಅಡುಗೆ ಅನಿಲದ ಕೊರತೆ ಉಂಟಾಗದಂತೆ ತಡೆಗಟ್ಟಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ.

ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಲು ಸಂಸ್ಕರಣಾ ಘಟಕಗಳಿಗೆ ಸರ್ಕಾರ ಸೂಚನೆ ನೀಡಿದೆ.

ಮನೆಗಳಿಗೆ ಪೂರೈಕೆಯಾಗುವ ಅಡುಗೆ ಅನಿಲದ ಅಗತ್ಯತೆ ಪೂರೈಸುವ ಸಲುವಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಹಿಂದುಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಗಳಿಗೆ ಅಗತ್ಯ ಪ್ರಮಾಣದ ಪ್ರೋಪೇನ್ ಮತ್ತು ಬ್ಯುಟೇನ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಉತ್ಪಾದಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ:

ಭಾರತವು ವಿಶ್ವದಲ್ಲೇ ಎಲ್‌ಪಿಜಿ ಆಮದು ಮಾಡುವ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ವರ್ಷ ದೇಶದಲ್ಲಿ ಸುಮಾರು 33.15 ಮಿಲಿಯನ್ ಮೆಟ್ರಿಕ್ ಟನ್ ಅಡುಗೆ ಅನಿಲ ಬಳಕೆಯಾಗಿದೆ. ದೇಶೀಯ ಬಳಕೆಯಲ್ಲಿ ಆಮದು ಎಲ್‌ಪಿಜಿಯ ಪಾಲು ಸುಮಾರು ಎರಡು ತೃತೀಯಾಂಶದಷ್ಟಿದ್ದು, ಅದರಲ್ಲಿ ಬಹುಪಾಲು ಮಧ್ಯಪ್ರಾಚ್ಯ ದೇಶಗಳಿಂದಲೇ ಪೂರೈಕೆ ಆಗುತ್ತದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 33.20 ಕೋಟಿ ಸಕ್ರಿಯ ಎಲ್‌ಪಿಜಿ ಗ್ರಾಹಕರಿದ್ದಾರೆ. ಈ ಹಿನ್ನೆಲೆ ಪೂರೈಕೆ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !