Wednesday, June 29, 2022

Latest Posts

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳ: ಸಿಐಸಿಎಸ್ ಇ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಐಸಿಎಸ್ ಇ ಅಥವಾ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷೆಗಳ ಪರಿಷತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.
ಕೊರೋನಾ ರಾಷ್ಟ್ರವ್ಯಾಪಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ, ಮೇ 4 ರಿಂದ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್ ಹೇಳಿದ್ದಾರೆ.
12 ನೇ ತರಗತಿ ಪರೀಕ್ಷೆಗಳನ್ನು ನಂತರದ ಹಂತದಲ್ಲಿ ನಡೆಸಲಾಗುವುದು, 10 ನೇ ತರಗತಿಯ ವಿದ್ಯಾರ್ಥಿಗಳು ತದನಂತರ ಆಫ್‌ಲೈನ್ ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಮಂಡಳಿಯಿಂದ ಅಭಿವೃದ್ಧಿಪಡಿಸಿದ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಪಡೆಯುವ ಆಯ್ಕೆಯನ್ನು ಪಡೆಯುತ್ತಾರೆಎಂದು ಅರಾಥೂನ್ ಹೇಳಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss