ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

DAP ರಸಗೊಬ್ಬರದ ಸಬ್ಸಿಡಿ 700 ರೂಪಾಯಿಗೆ ಹೆಚ್ಚಳ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, DAP ರಸಗೊಬ್ಬರದ ಮೇಲೆ ರೈತರಿಗೆ ನೀಡುವ ಸಬ್ಸಿಡಿಯನ್ನು 700 ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಸಂಪುಟ ಸಭೆ ನಂತರ ಮಾತನಾಡಿದ ರಸಗೊಬ್ಬರ ಖಾತೆ ರಾಜ್ಯ ಸಚಿವ ಮನಸುಖ್ ಮಾಂಡವಿಯಾ, ಈವರೆಗೆ DAP ರಸಗೊಬ್ಬರ ಖರೀದಿ ಮೇಲೆ ರೈತರಿಗೆ 500 ರೂಪಾಯಿ ಸಬ್ಸಿಡಿ ನೀಡಲಾಗುತ್ತಿತ್ತು. ಇದೀಗ ಡಿಎಪಿಗೆ (ಡೈ ಅಮೋನಿಯಂ ಫಾಸ್ಫೇಟ್​) ಒಟ್ಟು 1200 ರೂಪಾಯಿ ಸಬ್ಸಿಡಿ ನೀಡಲು ನಿರ್ಧಾರವಾಗಿದೆ. ರೈತರಿಗೆ ಒಂದು ಮೂಟೆ ಡಿಎಪಿ 1,200 ರೂಪಾಯಿಗೆ ಸಿಗಲಿದೆ. ಮಾರ್ಕೆಟ್‌ನಲ್ಲಿ 1 ಮೂಟೆ ಡಿಎಪಿ ಬೆಲೆ 2,400 ರೂ. ಇದೆ. ಯೂರಿಯಾಗೆ 900 ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೇಂದ್ರ ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಒಳನಾಡು ಜಲಸಾರಿಗೆ ಮಾರ್ಗದ ಅಭಿವೃದ್ಧಿಗೆ ನಿರ್ಣಯ ತೆಗೆದುಕೊಳ್ಳಲಾಗಿದ್ದು,. ಸಮುದ್ರದ ಆಳದ ಮಿಷನ್ ರಚನೆಗೆ ಕೇಂದ್ರ ಸಂಪುಟ ಒಪ್ಪಿಗೆ ಸಿಕ್ಕಿದೆ. ಇದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾಣಬಹುದಾಗಿದೆ ಎಂದರು.
ಸಮುದ್ರದ 6 ಸಾವಿರ ಮೀಟರ್ ಒಳಭಾಗದಲ್ಲಿ ಖನಿಜಗಳಿವೆ. ಸಮುದ್ರದ ಆಳದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಅಧ್ಯಯನ ನಡೆಯಲಿದೆ. ಅಡ್ವಾನ್ಸ್ ಮರೀನ್ ಸ್ಟೇಷನ್ ಸ್ಥಾಪಿಸಲಾಗುತ್ತೆ ಎಂದು ಸಚಿವ ಜಾವಡೇಕರ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss