ಹೆಚ್ಛಾಯ್ತು ಬಾಂಬ್‌ ಬೆದರಿಕೆ ಪ್ರಕರಣಗಳು! ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲೇ ಬಾಂಬ್‌ ಬೆದರಿಕೆ ಪ್ರಕರಣಗಳು ಏರಿಕೆಯಾಗುತ್ತಿದ್ದು,  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನಿಲ್ದಾಣದ ಅಧಿಕೃತ ಮೇಲ್‌ ಐಡಿಗೆ [email protected] ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಎಂದು ಮೇಲ್​ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!