ಮತ್ತೆ ಹೆಚ್ಚಿದ ಕೊರೊನಾ ಭೀತಿ: ಮಹಾರಾಷ್ಟ್ರದಲ್ಲಿ ಮಾಸ್ಕ್‌ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರವು ಆದೇಶ ಹೊರಡಿಸಿದೆ.

ಕೋವಿಡ್-19‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಮಹಾರಾಷ್ಟ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಪ್ರದೀಪ್‌ ವ್ಯಾಸ್‌ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳು ಸೇರಿದಂತೆ ಎಲ್ಲಾ ಮುಚ್ಚಿದ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!