ಹೊಸದಿಗಂತ ವರದಿ,ಕಾಸರಗೋಡು:
ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ದಿನ ಕಳೆದಂತೆ ವ್ಯಾಪಿಸುತ್ತಿದೆ. ಅದರಂತೆ ಶುಕ್ರವಾರ 371 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 348 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 137 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂವರು ಸಾವಿಗೀಡಾದರು.
ಕೇರಳದಲ್ಲಿ 16,338 ಹೊಸ ಪ್ರಕರಣ
ಕೇರಳದಲ್ಲಿಯೂ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು , ಶುಕ್ರವಾರ ಹೊಸದಾಗಿ 16,338 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 15,228 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 3848 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 20 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 20.16 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.