Wednesday, August 17, 2022

Latest Posts

ಕಾಸರಗೋಡಿನಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ಶನಿವಾರ ಬರೋಬ್ಬರಿ 1749 ಮಂದಿಗೆ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ ಮತ್ತೆ ಕೋವಿಡ್ ವೈರಸ್ ಆರ್ಭಟಿಸಿದ್ದು , ಹೊಸದಾಗಿ 1749 ಮಂದಿಗೆ ಪಾಸಿಟಿವ್ ಆಗಿದೆ. ಈ ಪೈಕಿ 1706 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 620 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲೂ ಕೋವಿಡ್ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು , ಹೊಸದಾಗಿ 41,971 ಜನರಿಗೆ ಕೊರೋನಾ ದೃಢಪಟ್ಟಿದೆ. ಇದರಲ್ಲಿ 38,662 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 27,456 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಎರ್ನಾಕುಳಂ ಜಿಲ್ಲೆಯಲ್ಲಿ 5492, ತಿರುವನಂತಪುರ 4560, ಮಲಪ್ಪುರಂ 4558, ತೃಶೂರು 4230, ಕಲ್ಲಿಕೋಟೆ 3981, ಪಾಲಕ್ಕಾಡು 3216, ಕಣ್ಣೂರು 3090, ಕೊಲ್ಲಂ 2838, ಆಲಪ್ಪುಳ 2433, ಕೋಟ್ಟಾಯಂ 2395, ಕಾಸರಗೋಡು 1749, ವಯನಾಡು 1196, ಪತ್ತನಂತ್ತಿಟ್ಟ 1180, ಇಡುಕ್ಕಿ ಜಿಲ್ಲೆಯಲ್ಲಿ 1053 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಕೇರಳದಲ್ಲಿ ಶನಿವಾರ 64 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 5746 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!